ಹಾಸನದ ವಿದ್ಯಾ ಸೌಧ ಪದವಿ ಪೂರ್ವ ಕಾಲೇಜು ವತಿಯಿಂದ ಕನ್ನಡ ರಾಜ್ಯೋತ್ಸವವನ್ನು ದಿನಾಂಕ 13- 11 -2020 ರ ಶುಕ್ರವಾರದಂದು ಆಚರಿಸಲಾಯಿತು. ಈ ಸುಸಂದರ್ಭದಲ್ಲಿ ವಿದ್ಯಾ ಸೌಧ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀಯುತ ಗೋಪಿನಾಥ್ ರವರು ಅಧ್ಯಕ್ಷತೆ ವಹಿಸಿದ್ದು, ಉಪನ್ಯಾಸಕರು ಉಪಸ್ಥಿತರಿದ್ದರು. ಕೋವಿಡ್ -19 ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಮನೆಯಲ್ಲಿಯೇ ನೃತ್ಯ, ಹಾಡುಗಾರಿಕೆ ಮತ್ತು ಚಿತ್ರಕಲಾ ಚಟುವಟಿಕೆಗಳಲ್ಲಿ ಉತ್ಸಾಹದಿಂದ ಭಾಗವಹಿಸಿದ್ದು, ಅದರ ವಿಡಿಯೋಗಳನ್ನು ರಾಜ್ಯೋತ್ಸವ ಆಚರಣೆಯ ಸಂದರ್ಭದಲ್ಲಿ ಪ್ರದರ್ಶಿಸಿದ್ದು, ಈ ಎಲ್ಲಾ ಚಟುವಟಿಕೆಗಳು ಎಲ್ಲರ ಮೆಚ್ಚುಗೆಗೆ ಪಾತ್ರವಾಯಿತು.ನಂತರ ಅಧ್ಯಕ್ಷರ ಭಾಷಣದೊಂದಿಗೆ ಪ್ರಾಂಶುಪಾಲರು ನಾಡಹಬ್ಬದ ವಿಶೇಷತೆಯನ್ನು ತಿಳಿಸಿದರು. ಕೊನೆಯಲ್ಲಿ ಉಪಸ್ಥಿತರಿದ್ದ ಎಲ್ಲರಿಗೂ ಸಿಹಿ ಹಂಚಿ ಕಾರ್ಯಕ್ರಮಕ್ಕೆ ತೆರೆ ಎಳೆಯಲಾಯಿತು.